Tuesday, October 23 , 2018 3:04 PM

ಐಡಿಬಿಐ ಬ್ಯಾಂಕ್ ನಿಂದ 760 ಎಕ್ಸಿಕ್ಯುಟೀವ್ ಹುದ್ದೆಗೆ ಅರ್ಜಿ ಆಹ್ವಾನ


Monday, February 12th, 2018

ಬೆಂಗಳೂರು: ಐಡಿಬಿಐ ಬ್ಯಾಂಕ್ ತನ್ನಲ್ಲಿರುವ 760 ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.

ಅರ್ಜಿ ಸಲ್ಲಿಸಲು 28 ಫೆಬ್ರವರಿ ಕೊನೆಯ ದಿನವಾಗಿದ್ದು, ಕರ್ನಾಟಕದ ಬೆಂಗಳೂರು, ಹಾಗೂ ಮಂಗಳೂರಿನಲ್ಲಿ ಆನ್ ಲೈನ್ ಪರೀಕ್ಷೆ ನಡೆಯಲಿದೆ. ಫೆ.6ರಿಂದ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ 60, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ 55ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 20 ವರ್ಷಗಳು. ಗರಿಷ್ಠ ವಯೋಮಿತಿ 25 ವರ್ಷಗಳಾಗಿವೆ. 1/1/2018ಕ್ಕೆ ಅನ್ವಯವಾಗುವಂತೆ. ಪ್ರಮುಖ ಅಂಶಗಳು ಒಟ್ಟು ಹುದ್ದೆ : 760 ಉದ್ಯೋಗದ ಸ್ಥಳ : ಭಾರತದಲ್ಲಿರುವ ಐಡಿಬಿಐ ಬ್ಯಾಂಕ್ ನ ಯಾವುದೇ ಬ್ರಾಂಚ್ ನಲ್ಲಿ  ವೇತನ : 17,000 ಕೊನೆ ದಿನಾಂಕ : 28/2/2018 ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ Kannadaviralnews@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.