Saturday, August 18 , 2018 5:16 AM

ಮಲಗುವಾಗ ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು ಯಾಕೆ..?


Saturday, March 3rd, 2018

sleepingಸ್ಪೆಷಲ್ ಡೆಸ್ಕ್: ಹಿಂದಿನ ಕಾಲದ ಹಿರಿಯರು ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಲು ಬಿಡುತ್ತಿರಲಿಲ್ಲ. ಈಗಲೂ ಕೂಡ ಹಿರಿಯರು ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬೇಡ ಎಂದು ಬೈಯುತ್ತಾರೆ. ಇದರ ಹಿಂದೆ ಒಂದು ಕಟ್ಟು ಕಥೆಯಿದೆ. ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಅಹ್ವಾನ ನೀಡಿದಂತೆ ಎಂಬ ನಂಬಿಕೆ. ಮಾನವನ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ.

ಇದನ್ನ ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದೊತ್ತಡ ಮತ್ತು ಹೈದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದರಿಂದ ಈ ಕಾಂತ ಕ್ಷೇತ್ರದ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ.

ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶ ಇರುತ್ತದೆ. ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿನಾಂಶವು ತಲೆಯಲ್ಲಿ ಶೇಖರಣೆಗೊಳ್ಳುತ್ತದೆ. ಇದರಿಂದ ತಲೆ ನೋವು, ಅಲ್ಜಿಮರ್ ಕಾಯಿಲೆ, ಪ್ರಜ್ಞಾ ಶೂನ್ಯತೆ ( ಅರಿವಿನ ಕೊರತೆ) ಪಾರ್ಕಿನ್ ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷಣಿಸುವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. (ಸಾಂದರ್ಭಿಕಚಿತ್ರ)

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ Kannadaviralnews@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.